ನಾಡಗೀತೆಗೆ ಕಾಲಮಿತಿ ನಿಗದಿ : ಸಿಎಂ ಬೊಮ್ಮಾಯಿ

Update: 2022-09-23 15:46 GMT
(ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - ಫೈಲ್ ಚಿತ್ರ)

ಬೆಂಗಳೂರು, ಸೆ.23: 'ರಾಷ್ಟ್ರಕವಿ ಕುವೆಂಪು ವಿರಚಿತ ನಾಡಿನ ಹೆಮ್ಮೆಯ ನಾಡಗೀತೆ ‘ಜಯಭಾರತ ಜನನಿಯ ತನುಜಾತೆ’ಗೆ ಧಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಿದ್ದೇವೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ಸಂಗೀತ ವಿಧೂಷಿ ಎಚ್.ಆರ್.ಲೀಲಾವತಿ ಅಧ್ಯಕ್ಷತೆ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ, ಇನ್ನು ಮುಂದೆ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್ ನಲ್ಲಿ ಹಾಡಲಾಗುತ್ತದೆ' ಎಂದು ಹೇಳಿದ್ದಾರೆ. 

--------------------------------------------

''ಕುವೆಂಪು ವಿರಚಿತ ನಾಡಗೀತೆ "ಜಯಭಾರತ ಜನನಿಯ ತನುಜಾತೆ" ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ''.

- ವಿ. ಸುನಿಲ್ ಕುಮಾರ್ , ಕನ್ನಡ - ಇಂಧನ ಮತ್ತು ಇಂಧನ ಸಚಿವರು

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News