ಶಿವಮೊಗ್ಗ: ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವು; ಜಮೀನು ಮಾಲಕ ವಶಕ್ಕೆ

Update: 2022-09-25 14:36 GMT

ಶಿವಮೊಗ್ಗ:  ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಕಾಡಿನ ಆನೆ ವನ್ಯಜೀವಿ ವಲಯದಲ್ಲಿ ನಡೆದಿದೆ.

ರವಿವಾರ ಬೆಳಗಿನ ಜಾವ ಆಹಾರ ಅರಸಿ ಬಂದ ಎರಡು ಗಂಡು ಕಾಡಾನೆಗಳು ಸಮೀಪದ ಆನೆಸರದ ಮೂಲಕ ಚನ್ನಹಳ್ಳಿಯ ಹೊಲಕ್ಕೆ ಹೋಗಿವೆ. ಅಲ್ಲಿ ವನ್ಯಜೀವಿಗಳಿಂದ ಬೆಳೆ ರಕ್ಷಿಸಿಕೊಳ್ಳಲು ಕಟ್ಟಿದ್ದಾರೆನ್ನಲಾದ ಐಬಿಕ್ಸ್ ವಿದ್ಯುತ್ ತಂತಿಯನ್ನು   ಆನೆಗಳು   ತುಳಿದು ವಿದ್ಯುತ್ ಪ್ರವಹಿಸಿದೆ ಎಂದು ತಿಳಿದು ಬಂದಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಜಮೀನು ಮಾಲಕ ಚಂದ್ರನಾಯ್ಕ್ ಅವರನ್ನು ವಶಕ್ಕೆ ಪಡೆದುಕೊಂಡಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News