ಬಿಜೆಪಿ ಸರಕಾರದಿಂದ ಜನರ ರಕ್ಷಣೆ ಅಸಾಧ್ಯ: ಡಿ.ಕೆ.ಶಿವಕುಮಾರ್

Update: 2022-09-26 12:09 GMT

ಬೆಂಗಳೂರು, ಸೆ. 26: ‘ಬಿಜೆಪಿ ಸರಕಾರದಲ್ಲಿ ರೋಗಿಗಳು, ರೈತರು, ಕಾರ್ಮಿಕರಿಗೆ ರಕ್ಷಣೆ ಇಲ್ಲವಾಗಿದೆ. ರಾಜ್ಯದಲ್ಲಿ ಸರಕಾರವೇ ಇಲ್ಲ ಎಂಬಂತೆ ಅದು ವಿಫಲವಾಗಿದೆ. ಕಾನೂನು ಸಚಿವರೇ ಹೇಳಿದ್ದಾರೆ, ನಾವು ಸರಕಾರದಲ್ಲಿ ಆಡಳಿತ ನಡೆಸುತ್ತಿಲ್ಲ, ಕೇವಲ ಸರಕಾರವನ್ನು ತಳ್ಳುತಿದ್ದೇವೆಂದು. ಹೀಗಾಗಿ ಈ ಸರಕಾರದಿಂದ ಜನರ ರಕ್ಷಣೆ ಅಸಾಧ್ಯವಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆಂಬುಲೆನ್ಸ್ ಸೇವೆ ಸ್ಥಗಿತಕ್ಕೆ ಆಕ್ಷೇಪಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಲಿಂಗಾಯತ ಸಿಎಂ ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೇವಲ ಲಿಂಗಾಯತ ಜಾತಿ ಮೇಲೆ ಸಿಎಂ ಆಗಿದ್ದಾರಾ? ಸಂವಿಧಾನದ ಪ್ರಕಾರ ಅವರು ಸಿಎಂ ಆಗಿದ್ದಾರೋ' ಎಂದು ಇದೇ ವೇಳೆ ಪ್ರಶ್ನಿಸಿದರು.

‘ನಾವು ಸರಕಾರವನ್ನು ಟಾರ್ಗೆಟ್ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಆದವರು ಸರಕಾರದ ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ಸರಕಾರದ ವೈಫಲ್ಯಗಳನ್ನು ಇಟ್ಟುಕೊಂಡಷ್ಟೇ ಅವರನ್ನು ಗುರಿ ಮಾಡುತ್ತಿದ್ದೇವೆ. ಇದರಲ್ಲಿ ಜಾತಿ ಪ್ರಶ್ನೆಯೇ ಇಲ್ಲ’ ಎಂದು ಶಿವಕುಮಾರ್ ತಿರುಗೇಟು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News