ಡರ್ಟಿ ಪಾಲಿಟಿಕ್ಸ್ ಮಾಡುವುದು ಸಂಘ ಪರಿವಾರದವರು: ಸಿದ್ದರಾಮಯ್ಯ

Update: 2022-09-26 15:53 GMT

ಮೈಸೂರು,ಸೆ.26: ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲೆಯ ವರುಣಾ ವಿಧಾನಸಭೆ ಕ್ಷೇತ್ರದ ಚಿಕ್ಕಹೊಮ್ಮ ಗ್ರಾಮದ ಕೆರೆಗೆ ಬಾಗೀನ ಅರ್ಪಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ , ನಾವು ಕೀಳು ಮಟ್ಟದ ರಾಜಕಾರಣ ಮಾಡಿಲ್ಲ. ಬಿಜೆಪಿ ಸರ್ಕಾರದವರು ರಾಜಕಾರಣ ಮಾಡುವ ಉದ್ದೇಶದಿಂದ ಮಾತನಾಡುತ್ತಾರೆ. ಡರ್ಟಿ ಪಾಲಿಟಿಕ್ಸ್ ಮಾಡುವುದು ಸಂಘ ಪರಿವಾರದವರು. ಕಾಂಗ್ರೆಸ್‍ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಆದರೆ ಅವರು ಮಹಾತ್ಮಗಾಂಧಿ ಕೊಂದವರನ್ನು ಇವರು ಆರಾಧಿಸುತ್ತಾರೆ ಎಂದು ಕಿಡಿಕಾರಿದರು. 

ಸಂಘ ಪರಿವಾರದವರು ಗಣೇಶನ ಮೆರವಣಿಗೆಯಲ್ಲಿ ಗೋಡ್ಸೆ ಫೋಟೋ ಇಟ್ಟುಕೊಂಡು ಓಡಾಡ್ತಾರೆ. ಇವರಿಗೆ ಯಾವ ನೈತಿಕತೆ ಇದೆ? ಪಾಪ ಇವರಿಗೆ ಡರ್ಟಿ ಪಾಲಿಟಿಕ್ಸ್ ಅಂದ್ರೆ ಗೊತ್ತಿಲ್ಲ. ಭ್ರಷ್ಟಾಚಾರ ಮಾಡುತ್ತಾ ಇದ್ದೀರಾ ಎಂದರೆ ಅದು ಡರ್ಟಿ ಪಾಲಿಟಿಕ್ಸಾ ಎಂದು ಟೀಕಿಸಿದರು. 

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಕೊಳಿ, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News