ಚಾಮರಾಜನಗರ | ಪಿಎಫ್ಐ ಜಿಲ್ಲಾಧ್ಯಕ್ಷ, ಕಾರ್ಯದರ್ಶಿಯ ಬಂಧನ
Update: 2022-09-27 04:23 GMT
ಚಾಮರಾಜನಗರ, ಸೆ.27: ಬೆಳ್ಳಂ ಬೆಳಗ್ಗೆ ಚಾಮರಾಜನಗರ ಪಟ್ಟಣದಲ್ಲಿ ಪೊಲೀಸರು ಪಿಎಫ್ಐ(PFI) ಮುಖಂಡರ ನಿವಾಸದ ಮೇಲೆ ದಾಳಿ ನಡೆಸಿ ಜಿಲ್ಲಾಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ನೇತೃತ್ವದಲ್ಲಿ ಪಟ್ಟಣದ ಗಾಳೀಪುರ ವರದರಾಜಪುರ ಸೇರಿದಂತೆ ಕೆಲವು ಬಡಾವಣೆಯಲ್ಲಿ ದಾಳಿ ನಡೆಸಿದ ಪೊಲೀಸರು ಪಿಎಫ್ಐ ಜಿಲ್ಲಾಧ್ಯಕ್ಷ ಕಫೀಲ್ ಅಹ್ಮದ್ ಹಾಗೂ ಕಾರ್ಯದರ್ಶಿ ಸುಹೈಬ್ ಖಾನ್ ಅವರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ನ್ಯಾಯಾಧೀಶರು ಬಂಧಿತರಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕೋಲಾರ | ಪಿಎಫ್ಐ ಜಿಲ್ಲಾಧ್ಯಕ್ಷ ಸಹಿತ ಹಲವು ಮುಖಂಡರು ಪೊಲೀಸ್ ವಶಕ್ಕೆ