ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಸೌದಿಯ ನೂತನ ಪ್ರಧಾನ ಮಂತ್ರಿ
Update: 2022-09-27 19:06 GMT
ರಿಯಾದ್, ಸೆ.27: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ (Crown Prince Mohammed bin Salman) ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಮಂಗಳವಾರ ಸಂಪುಟ ಪುನಾರಚನೆ ಮಾಡಿರುವ ಸೌದಿ ದೊರೆ ಸಲ್ಮಾನ್, ತನ್ನ ಇನ್ನೊಬ್ಬ ಪುತ್ರ ಖಾಲಿದ್ ಬಿನ್ ಸಲ್ಮಾನ್ ಅವರನ್ನು ನೂತನ ರಕ್ಷಣಾ ಸಚಿವರಾಗಿ ನೇಮಕ ಮಾಡಿದ್ದಾರೆ. ಅವರು ಈ ಹಿಂದೆ ಉಪ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ವಿತ್ತ, ವಿದೇಶಾಂಗ ಹಾಗೂ ಹೂಡಿಕೆ ಸಚಿವರು ಬದಲಾಗಿಲ್ಲ. ಇನ್ನು ಸಂಪುಟದ ಉಸ್ತುವಾರಿ ನೂತನ ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರದ್ದಾಗಲಿದೆ.