ಪಿಎಫ್​ಐ ನಿಷೇಧ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

Update: 2022-09-28 03:59 GMT

ಬೆಂಗಳೂರು:  ಮುಂದಿನ ಐದು ವರ್ಷಗಳ ಅವಧಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಕುರಿತು  ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಪ್ರತಿಕ್ರಿಯಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪಿಎಫ್​ಐ ನಿಷೇಧ​ ಮಾಡಿದ್ದನ್ನು ನಾನು ಸ್ವಾಗತ ಮಾಡುತ್ತೇನೆ. ದುಷ್ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್​ಐ ವಿರುದ್ಧ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ' ಎಂದು ತಿಳಿಸಿದ್ದಾರೆ.

'ಕೇಂದ್ರ ಸರ್ಕಾರ ಬಲವಾದ ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಿ, ದೇಶದ ಏಕತೆ, ಸಮಗ್ರತೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ' ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದ್ನನ್ನೂ ಓದಿ:  ಪಿಎಫ್‌ಐ ಮತ್ತದರ 8 ಅಂಗಸಂಸ್ಥೆಗಳಿಗೆ ಕೇಂದ್ರ ಸರಕಾರದಿಂದ 5 ವರ್ಷ ನಿಷೇಧ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News