ಮೈಸೂರು ದಸರಾದಲ್ಲಿ "ಅಪ್ಪು ದಿನ" ಚಲನಚಿತ್ರೋತ್ಸವ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

Update: 2022-09-28 14:52 GMT

ಮೈಸೂರು,ಸೆ.28: ಮೈಸೂರು ದಸರಾ-2022 ಹಾಗೂ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ಆಯೋಜಿಸಲಾಗಿರುವ "ಅಪ್ಪುದಿನ" ಚಲನಚಿತ್ರೋತ್ಸವನ್ನು ಡಾ.ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್  ಅವರು ಪುನೀತ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.

ನಗರದ ಮಾಲ್ ಆಫ್ ಮೈಸೂರಿನಲ್ಲಿರುವ ಐನಾಕ್ಸ್ ಚಿತ್ರಮಂದಿರದಲ್ಲಿ ಬುಧವಾರ ಚಲನಚಿತ್ರೋತ್ಸವ ಉದ್ಘಾಟನೆ ಮೊದಲಿಗೆ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಬೆಟ್ಟೆ ಹೂವು ಚಿತ್ರವನ್ನು ಪ್ರದರ್ಶಿಸಲಾಯಿತು.

ಅವರೊಂದಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು.

ಇದಕ್ಕೂ ಮೊದಲು ಶಕ್ತಿಧಾಮ ಮಕ್ಕಳು ಬೆಟ್ಟದ ಹೂವು ಚಿತ್ರವನ್ನು ವೀಕ್ಷಿಸಿದರು. ಆಸ್ವಿನಿ ಪುನೀತ್ ರಾಜ್ ಕುಮಾರ್ ಸಹ  ಕೆಲ ಕಾಲ ಚಿತ್ರವನ್ಮು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News