ಮೈಸೂರು ದಸರಾ | ಯೋಗಾಸನ ಸ್ಪರ್ಧೆ ಉದ್ಘಾಟನೆ

Update: 2022-09-29 05:05 GMT

ಮೈಸೂರು, ಸೆ.29: ನಾಡಹಬ್ಬ ಮೈಸೂರು ದಸರಾ(Mysuru Dasara) ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.

ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಯೋಗ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಸಚಿವರು, ಯೋಗ ಕಲಿಕೆಗೆ ಈಗ ಹೆಚ್ಚು ಒತ್ತು ನೀಡಲಾಗುತ್ತಿದೆ. ಯೋಗವನ್ನು ಮಾನಸಿಕ ಮತ್ತು ದೈಹಿಕ ವಿಕಸನದ ಸಾಧನವಾಗಿ ಗುರುತಿಸಲಾಗಿದೆ. ಯೋಗಾಭ್ಯಾಸ ಮಾಡುವುದರಿಂದ ಮನಸ್ಸು ಮತ್ತು ದೇಹ ಎರಡನ್ನು ಆರೋಗ್ಯವಾಗಿಟ್ಟುಕೊಳ್ಳಬಹುದು ಎಂದರು.

ಸಂಸದ ಪ್ರತಾಪ್ ಸಿಂಹ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್, ಜಂಗಲ್ಸ್ ಲಾಡ್ಜ್ಸ್ ಆ್ಯಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷ ಅಪ್ಪಣ್ಣ, ದಸರಾ ಸಾಹಸ ಕ್ರೀಡಾ ಉಪಾಧ್ಯಕ್ಷ ಶಿವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News