ಬಿಜೆಪಿ ನನಗೆ ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದೆ: ಡಿ.ಕೆ ಶಿವಕುಮಾರ್

Update: 2022-09-29 09:30 GMT

ಬೆಂಗಳೂರು: 'ಬಿಜೆಪಿಯವರಿಗೆ ನನ್ನ ವಿರುದ್ಧ ರಾಜಕೀಯ ಹೋರಾಟ ಮಾಡುವ ಶಕ್ತಿ ಇಲ್ಲ‌, ಹಾಗಾಗಿ ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ''ನಾನು ಕಾನೂನನ್ನು ಗೌರವಿಸುವ ವ್ಯಕ್ತಿ. ನಿರುದ್ಯೋಗ, ಬೆಲೆ ಏರಿಕೆ ಹಾಗೂ ಇನ್ನಿತರೆ ಸಮಸ್ಯೆಗಳ ವಿರುದ್ಧ ಮಾತನಾಡುತ್ತಿರುವುದೇ ನನ್ನ ಅಪರಾಧ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿನ್ನೆ ( ಬುಧವಾರ) ಬೆಳಗ್ಗೆ 11ಗಂಟೆ ಸುಮಾರಿಗೆ ಡಿ.ಕೆ  ಶಿವಕುಮಾರ್ ಅವರ ರಾಮನಗರ ಜಿಲ್ಲೆಯ ಕನಕಪುರ, ದೊಡ್ಡ ಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News