ಯುಜಿ-ಸಿಇಟಿ ಪರಿಷ್ಕೃತ ಫಲಿತಾಂಶ ಅ.1ಕ್ಕೆ ಪ್ರಕಟ

Update: 2022-09-29 18:30 GMT

ಬೆಂಗಳೂರು, ಸೆ.29: ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿ-ಸಿಇಟಿ-2022ರ ಪರಿಷ್ಕೃತ ಫಲಿತಾಂಶವನ್ನು ಅಕ್ಟೋಬರ್ 1ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದೆ. 

ಈ ಮೊದಲು ಯುಜಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೋರ್ಸ್‍ಗಳ ಪ್ರವೇಶಕ್ಕೆ ಸಿಇಟಿ ಶ್ರೇಯಾಂಕಗಳನ್ನು ನಿರ್ಧರಿಸಲು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರಕಾರದ ಸಮಿತಿಯು ಎರಡು ಪ್ರಸ್ತಾವನೆಗಳನ್ನು ಒಳಗೊಂಡ ತನ್ನ ವರದಿಯನ್ನು ಸಲ್ಲಿಸಿತ್ತು. 

ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲಿ ಪಡೆದ ಪಿಯು ಅಂಕಗಳನ್ನು ಪ್ರಸಕ್ತ ಈ ವರ್ಷದ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಪರಿಗಣಿಸಿ ಹೊಸದಾಗಿ ಜೇಷ್ಠತಾ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ(ಕೆಇಎ) ಹೈಕೋರ್ಟ್ ಏಕಸದಸ್ಯ ಪೀಠವು ನಿರ್ದೇಶನ ನೀಡಿತ್ತು. 

ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸಲ್ಲಿಸಿರುವ ಮೇಲ್ಮನವಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಅ.1ಕ್ಕೆ ಕೆಇಎ ಪರಿಷ್ಕøತ ಫಲಿತಾಂಶ ಪ್ರಕಟ ಮಾಡಲಿದೆ. ಅಭ್ಯರ್ಥಿಗಳು ಪರಿಷ್ಕೃತ ಫಲಿತಾಂಶ ಮತ್ತು ಮೆರಿಟ್ ಪಟ್ಟಿಯನ್ನು ವೆಬ್‍ಸೈಟ್-https://cetonline.karnataka.gov.in/ ಮೂಲಕ ಪರಿಶೀಲಿಸಬಹುದು ಮತ್ತು ಡೌನ್‍ಲೋಡ್ ಮಾಡಬಹುದು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News