‘ಮತಾಂತರ ನಿಷೇಧ' ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Update: 2022-09-30 14:50 GMT

ಬೆಂಗಳೂರು, ಸೆ. 30: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು(ಬಲವಂತದ ಮತಾಂತರ ನಿಷೇಧ) ಸಂರಕ್ಷಣಾ ವಿಧೇಯಕ-2022ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ.

ಶುಕ್ರವಾರ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದ್ದು, ಅಮಿಷ, ಒತ್ತಾಯ, ಪ್ರಲೋಭನೆ ಮೂಲಕ ಬಲವಂತದ ಮತಾಂತರಕ್ಕೆ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಬೃಹತ್ ಮೊತ್ತದ ದಂಡ ವಿಧಿಸಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಬೆಳಗಾವಿಯ ವಿಧಾನಸಭೆಯ ಅಧಿವೇಶನದಲ್ಲಿ ವಿಧೇಯಕವನ್ನು ಅನುಮೋದನೆ ಪಡೆದುಕೊಳ್ಳಲಾಗಿತ್ತು. ಆದರೆ, ವಿಧಾನ ಪರಿಷತ್‍ನಲ್ಲಿ ಬಿಜೆಪಿ ಸಂಖ್ಯಾಬಲದ ಕೊರತೆ ಹಿನ್ನೆಲೆಯಲ್ಲಿ ಮಂಡನೆ ಮಾಡಿರಲಿಲ್ಲ. ಇದೀಗ ಇತ್ತೀಚೆಗೆ ನಡೆದ ವಿಧಾನ ಪರಿಷತ್ ಹಾಗೂ ವಿಧಾನಸಭೆ ಕಲಾಪದಲ್ಲಿ ವಿಪಕ್ಷಗಳ ವಿರೋಧದ ಮಧ್ಯೆ ವಿಧೇಯಕವನ್ನು ರಾಜ್ಯ ಸರಕಾರ ಒಪ್ಪಿಗೆ ಪಡೆದುಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News