ಭಾರತ್ ಜೋಡೊ ಯಾತ್ರೆಯಲ್ಲಿ ನಾವೂ 'PayCM' ಟಿ-ಶರ್ಟ್ ಧರಿಸಿ ಪಾಲ್ಗೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್

Update: 2022-10-01 13:58 GMT

ಮೈಸೂರು: ಭಾರತ್ ಜೋಡೊ ಯಾತ್ರೆಯಲ್ಲಿ ನಾನು ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ‌ಸಿದ್ದರಾಮಯ್ಯ ಮತ್ತು ನಾಯಕರು ಪೇಸಿಎಂ ಟಿ-ಶರ್ಟ್ ಧರಿಸಿ ಪಾಲ್ಗೊಳ್ಳುತ್ತೇವೆ. ಬಿಜೆಪಿಯವರು ಅದೇನ್ ಮಾಡ್ಕೊತಾರೋ‌ ನೋಡುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿದ್ದಾರೆ. 

ನಂಜನಗೂಡು ತಾಲೂಕಿನ ಕಳಲೆ ಗೇಟ್‌ ಬಳಿ‌ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, 'ಗುಂಡ್ಲುಪೇಟೆಯಲ್ಲಿ ಪಾದಯಾತ್ರೆ ವೇಳೆ‌ ನಮ್ಮ ಕಾರ್ಯಕರ್ತ ಪೇಸಿಎಂ ಟಿ-ಶರ್ಟ್ ಧರಿಸಿದ್ದಕ್ಕೆ ಬಧಿಸಿದ್ದಾರೆ. ಇಂಥದ್ದಕ್ಕೆಲ್ಲ ನಾವು ಹೆದರುವುದಿಲ್ಲ; ಜಗ್ಗುವುದಿಲ್ಲ' ಎಂದು ಕಿಡಿಕಾರಿದ್ದಾರೆ. 

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ,  'ಸರ್ಕಾರ ಕಾಂಗ್ರೆಸ್ ವಿರುದ್ಧ ಪೊಲೀಸನವರನ್ನು ಛೂ ಬಿಟ್ಟಿದೆ. ನಾನು, ಡಿ.ಕೆ. ಶಿವಕುಮಾರ್‌ ಹಾಗೂ ಸುರ್ಜೇವಾಲಾ ಅವರು PayCM ಪೋಸ್ಟರ್‌ ಅಂಟಿಸಿದ್ದಕ್ಕೆ ನಮ್ಮ ಮೇಲೆ ಕೇಸ್‌ ಹಾಕಿದ್ದಾರೆ. ಇಂದು PayCM ಟೀ ಶರ್ಟ್ ಧರಿಸಿದ್ದ ನಮ್ಮ ಕಾರ್ಯಕರ್ತನ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ. ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಜೀವಂತವಿದೆಯೇ?' ಎಂದು ಪ್ರಶ್ನೆ ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News