ಉತ್ತರಪ್ರದೇಶ ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

Update: 2022-10-04 10:02 GMT
Photo: twitter/rabibehera1964

ಹೊಸದಿಲ್ಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ರವಿವಾರ ಹದಗೆಟ್ಟಿದೆ. ಹೀಗಾಗಿ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಯ ಐಸಿಯುಗೆ ಸ್ಥಳಾಂತರಿಸಲಾಗಿದೆ. ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಐಸಿಯುಗೆ ಸ್ಥಳಾಂತರಿಸಲಾಗಿದೆ.

ಸದ್ಯ ಮುಲಾಯಂ ಸಿಂಗ್ ಯಾದವ್ ಅವರನ್ನು ಮೇದಾಂತ ಆಸ್ಪತ್ರೆಯ ಐಸಿಯು-5ಕ್ಕೆ ಸ್ಥಳಾಂತರಿಸಲಾಗಿದ್ದು, ಡಾ ಸುಶೀಲಾ ಕಟಾರಿಯಾ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

ಮುಲಾಯಂ ಸಿಂಗ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ನಂತರ ಅಖಿಲೇಶ್ ಯಾದವ್ ದಿಲ್ಲಿಗೆ ತೆರಳಿದ್ದಾರೆ. ಇದರೊಂದಿಗೆ ಶಿವಪಾಲ್ ಸಿಂಗ್ ಯಾದವ್ ಕೂಡ ಮೇದಾಂತ ಆಸ್ಪತ್ರೆ ತಲುಪುತ್ತಿದ್ದಾರೆ.  

ಮುಲಾಯಂ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಯುಪಿ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹಾರೈಸಿದ್ದಾರೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಹದಗೆಟ್ಟಿರುವ ಬಗ್ಗೆ ಮಾಹಿತಿ ಲಭಿಸಿದೆ. ಅವರು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ ಎಂದು ಮೌರ್ಯ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News