ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ

Update: 2022-10-05 09:43 GMT

ಮೈಸೂರು, ಅ.5: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಗದಿತ ಸಮಯಕ್ಕಿಂತ ಐದು ನಿಮಿಷ ಮುಂಚಿತವಾಗಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.

ಇಂದು ಅಪರಾಹ್ನ 2:36 ರಿಂದ 2:50ಕ್ಕೆ ಪೂಜೆ ಸಲ್ಲಿಸಬೇಕಿತ್ತಿದ್ದಾರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಐದು ನಿಮಿಷ ಮುಂಚಿತವಾಗೆ ಪೂಜೆ ಸಲ್ಲಿಸಿದರು.

ಬಳಿಕ ತೆರೆದ ಜೀಪ್ ನಲ್ಲಿ ಅರಮನೆಯೊಳಕ್ಕೆ ಪ್ರವೇಶಿಸಿದ ಅವರು ನೆರೆದಿದ್ದ ಜನರನ್ನು ಕಂಡು ಪುಳಕಿತರಾಗಿ ಕೈ ಬೀಸಿ ವೇದಿಕೆಗೆ ಆಗಮಿಸಿದರು.

ಮುಖ್ಯಮಂತ್ರಿ ಜೊತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಚಿವರುಗಳಾದ ಬಿ.ಸಿ.ಪಾಟೀಲ್, ಸುನೀಲ್ ಕುಮಾರ್, ಶಾಸಕರುಗಳಾದ ಎಸ್.ಎ.ರಾಮದಾಸ್, ಹರ್ಷವರ್ಧನ್, ಸಿ.ಎಸ್.ನಿರಂಜನ ಕುಮಾರ್, ನಿಗಮ ಮಂಡಳಿಗಳ ಅಧ್ಯಕ್ಷರುಗಳಾದ ಎಸ್.ಮಹದೇವಯ್ಯ, ಮಿರ್ಲೆ ಶ್ರೀನಿವಾಸಗೌಡ, ಕೋಟೆ ಎಂ.ಶಿವಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಬಿಜೆಪಿ ಮುಖಂಡರುಗಳಾದ ದೇವನೂರು ಜಿ. ಪ್ರತಾಪ್, ಕೇಬಲ್ ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News