ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ
Update: 2022-10-05 13:30 GMT
ಬೆಂಗಳೂರು, ಅ.5: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಅ.6, 7ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: ಕಾಂಗ್ರೆಸ್ಸಿಗರ ‘ಭಾರತ ಬಿಟ್ಟು ಓಡೋ ಯಾತ್ರೆ’: ನಳಿನ್ ಕುಮಾರ್ ಕಟೀಲ್ ಟೀಕೆ
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು ಸಹಿತ ವರ್ಷಧಾರೆ ಆಗಲಿದೆ. ಅಂತೆಯೇ ಉತ್ತರ ಒಳನಾಡು ಭಾಗದಲ್ಲಿಯೂ ಮಳೆ ಬೀಳಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.