ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
Update: 2022-10-06 07:19 GMT
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಿನ್ನೆ (ಬುಧವಾರ) ತಡರಾತ್ರಿ ಉದನೂರ ರಸ್ತೆಯ ಬಸಂತ ನಗರದಲ್ಲಿ ನಡೆದಿದೆ.
ಸಂತೋಷ್ ಕಾಲೋನಿ ನಿವಾಸಿ ಲಕ್ಷ್ಮಿಪುತ್ರ (35) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ.
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಯುವಕನನ್ನು ಕೊಲೆಗೈದಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಅಶೋಕ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.