ಭಾರತ್ ಜೋಡೊ ಯಾತ್ರೆ ವೇಳೆ ಪತ್ರಕರ್ತರ ಮೇಲೆ ಹಲ್ಲೆ ಆರೋಪ: ಎಸ್ಪಿ ನಿರಾಕರಣೆ

Update: 2022-10-06 14:50 GMT

ಮಂಡ್ಯ, ಅ.6: ರಾಹುಲ್ ಗಾಂಧಿ ಭಾರತ್ ಜೋಡೊಯಾತ್ರೆ ವೇಳೆ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ನಡೆದಿದೆ ಎನ್ನಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರೋಪವನ್ನು  ನಿರಾಕಿಸಿದ್ದಾರೆ. 

ಘಟನೆಯಲ್ಲಿ ಕೆಲವು ಪತ್ರಕರ್ತರಿಗೆ ಗಾಯಗಳಾಗಿವೆ ಎಂದು ವರದಿಯಾಗಿದ್ದು, ಪೊಲೀಸರ ವರ್ತನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗಿದೆ. ರಣದೀಪ್‍ಸಿಂಗ್ ಸುರ್ಜೆವಾಲಾ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಘಟನೆಯನ್ನು ಖಂಡಿಸಿದ್ದಾರೆ.

ಘಟನೆ ಬಗ್ಗೆ ಎಸ್ಪಿ ಯತೀಶ್ ಪ್ರತಿಕ್ರಿಯಿಸಿ, ನೂಕಾಟದ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ಪೊಲೀಸರಿಗೂ ಗಾಯಗಳಾಗಿವೆ. ಈ ವೇಳೆ ನಾನೂ ಕೆಳಬಿದ್ದು ಯೂನಿಫಾರಂನ ನಾಮಫಲಕ ಕಿತ್ತುಹೋಗಿದೆ. ಪೊಲೀಸ್ ಮತ್ತು ಪತ್ರಕರ್ತರು ಪರಸ್ಪರ ಸಹಕಾರದಿಂದಲೇ ಪಾದಯಾತ್ರೆ ವೇಳೆ ಕಾರ್ಯನಿರ್ವಹಿಸುತ್ತಿದ್ದೇವೆ. ಪತ್ರಕರ್ತರ ಮೇಲೆ ನಡೆದಿರುವ ಹಲ್ಲೆಯ ವಿಡೀಯೋ, ಸಾಕ್ಷಿಗಳಿದ್ದರೆ ಪರಿಗಣಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News