ಜನಸಂಖ್ಯೆ ನಿಯಂತ್ರಣ ಆಗಬೇಕೆಂಬ ಮೋಹನ್ ಭಾಗವತ್ ಹೇಳಿಕೆ ಬಗ್ಗೆ ವಿಸ್ತೃತ ಚರ್ಚೆ ಅಗತ್ಯ: ಸಿ.ಟಿ.ರವಿ

Update: 2022-10-06 15:18 GMT

ಬೆಂಗಳೂರು, ಅ. 6: ‘ಎಲ್ಲ ಧರ್ಮಿಯರಿಗೂ ಅನ್ವಯ ಆಗುವಂತೆ ಜನಸಂಖ್ಯೆ ನಿಯಂತ್ರಣ ಆಗಬೇಕೆಂಬ ಆರೆಸೆಸ್ಸ್ ಸರ ಸಂಘಚಾಲಕ ಮೋಹನ್ ಭಾಗವತ್ ಅವರ ಹೇಳಿಕೆ ಬಗ್ಗೆ ಸಾರ್ವಜನಿಕ ಚರ್ಚೆ ಅಗತ್ಯ. ಆ ಬಳಿಕ ದೇಶ ಸಂಸತ್ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಲ್ಲಿಯೂ ಚರ್ಚಿಸಿ ಕಾನೂನು ಜಾರಿಗೆ ತರಬೇಕು' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದ್ದಾರೆ.

ಗುರುವಾರ ನಗರದ ಅರಮನೆ ಮೈದಾನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾರನ್ನೋ ಕೇಳಿ ಕಾನೂನು ಮಾಡುವ ಅಗತ್ಯವಿಲ್ಲ. ಆದರೆ, ಈ ಬಗ್ಗೆ ವಿಸ್ತøತ ಚರ್ಚೆ ಆಗಬೇಕೆಂಬುದು ನಮ್ಮ ಅಪೇಕ್ಷೆ. ಆ ಬಳಿಕ ಕಾನೂನು ಜಾರಿಗೆ ತರಲಾಗುವುದು' ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

‘ದೇಶದಲ್ಲಿ ಜಾತಿಯತೆ ಮತ್ತು ಅಸ್ಪೃಶ್ಯತೆ ಮುಕ್ತ ಆಗಬೇಕು. ಯಾವುದೇ ರೀತಿಯ ತಾರತಮ್ಯಗಳು ಇರಬಾರದು ಎಂಬುದು ಆರೆಸೆಸ್ಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಉದ್ದೇಶ. ಆರೆಸೆಸ್ಸ್ ಬಹಳ ಹಿಂದಿನಿಂದಲೂ ಅಸ್ಪೃಶ್ಯತೆ ನಿವಾರಣೆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಅದೇ ರೀತಿಯಲ್ಲಿ ಬಿಜೆಪಿಯೂ ಆ ವಿಚಾರಕ್ಕೆ ಬದ್ಧವಾಗಿದೆ' ಎಂದು ರವಿ ನುಡಿದರು.

‘ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸ್ವಇಚ್ಚೆಯಿಂದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿಲ್ಲ. ಸೋನಿಯಾಗಾಂಧಿ ಅವರ ನಿರ್ದೇಶನದಂತೆ ನಾಮಪತ್ರ ಸಲ್ಲಿಸಿದ್ದಾರೆ. ಅವರು ಬಯಸಿದರೆ ಚುನಾವಣೆ ನಡೆಯಬಹುದು. ಇಲ್ಲದಿದ್ದರೆ ಏನು ಬೇಕಾದರೂ ಆಗಬಹುದು. ಮಲ್ಲಿಕಾರ್ಜುನ ಖರ್ಗೆ ಅವರು ಮೊದಲು ತಮ್ಮ ಗುಲಾಮಿ ಮನಸ್ಥಿಯಿಂದ ಹೊರಬರಬೇಕು'

-ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News