SC, ST ಮೀಸಲಾತಿ ಹೆಚ್ಚಿಸುವ ಸರ್ಕಾರದ ನಿರ್ಧಾರಕ್ಕೆ ಸ್ವಾಗತ: ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ

Update: 2022-10-07 18:16 GMT

ಬೆಂಗಳೂರು:  ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. 

ಈ ಕುರಿತು ಪ್ರತಿಕ್ರಯಿಸಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, 'ಕಾರ್ಯಕಾರಿ ಆದೇಶ ಪ್ರತಿ ತಲುಪಿದ ಬಳಿಕ ಧರಣಿ ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ' ಎಂದು ತಿಳಿಸಿದ್ದಾರೆ. 

''ಬಹುದಿನದ ಬೇಡಿಕೆಯನ್ನ ಸರ್ಕಾರ ಈಡೇರಿಸಿದರೆ ಅದನ್ನು ನಾವು ಕೂಡ ಸ್ವಾಗತ ಮಾಡಿಕೊಳ್ಳುತ್ತಿದ್ದೇವೆ. ಈ ಸಮುದಾಯ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ರಾಜಕೀಯ ಪ್ರಾತೀತ್ಯ ಕೊಟ್ಟಿದೆ. ಆರ್ಥಿಕ ಪ್ರಾತಿನಿತ್ಯವನ್ನು ಕೊಟ್ಟಿದೆ. 2011 ರ ಜನಗಣತಿಯ ಅನುಗುಣವಾಗಿ ಮೀಸಲಾತಿಯನ್ನ ಹೆಚ್ಚು ಮಾಡಬೇಕು ಎನ್ನುವುದು ನಮ್ಮ ಆಗ್ರಹ'' ಎಂದು ಹೇಳಿದ್ದಾರೆ. 

ಸ್ವಾಮೀಜಿ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ 246 ದಿನಗಳಿಂದ ಧರಣಿ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News