ಪಾಂಡವರಕಲ್ಲು: ಎಸ್.ಡಿ.ಪಿ.ಐ.ಯಿಂದ ನಿರ್ಮಿತ ಮನೆ ಫಲಾನುಭವಿಗೆ ಹಸ್ತಾಂತರ

Update: 2022-10-08 07:21 GMT

ಬಂಟ್ವಾಳ, ಅ.8: ಎಸ್.ಡಿ.ಪಿ.ಐ. ಪಾಂಡವರಕಲ್ಲು ವತಿಯಿಂದ ಅರ್ಹ ಕುಟುಂಬವೊಂದಕ್ಕೆ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು ಶುಕ್ರವಾರ ಜರುಗಿತು.

ಎಸ್.ಡಿ.ಪಿ.ಐ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಮನೆಯ ಕೀಲಿಕೈಯನ್ನು ಫಲಾನುಭವಿಗೆ ಹಸ್ತಾಂತರಿಸಿದರು. ಪಾಂಡವರಕಲ್ಲು ಬದ್ರಿಯಾ ಜುಮಾ ಮಸ್ಜಿದ್ ಖತೀಬ್ ರಿಯಾಝ್ ಫೈಝಿ ದುಆಗೈದರು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮೂನಿಶ್ ಅಲಿ ಬಂಟ್ವಾಳ, ಪಾಂಡವರಕಲ್ಲು ಬದ್ರಿಯಾ ಜುಮಾ ಮಸ್ಜಿದ್ ಅಧ್ಯಕ್ಷ ಹಾಗೂ ಬಡಗ ಕಜೆಕಾರು ಗ್ರಾಪಂ ಸದಸ್ಯ ಅಥಾವುಲ್ಲಾ ಪಾಂಡವರಕಲ್ಲು, ಜಮಾಅತ್ ಉಪಾಧ್ಯಕ್ಷ ಹಕೀಂ ಕುದುರು, ಪ್ರಧಾನ ಕಾರ್ಯದರ್ಶಿ ಕೆ.ಪಿ.ಉಮರ್ ಮುಸ್ಲಿಯಾರ್, ಎಸ್.ಡಿ.ಪಿ.ಐ. ಬಡಗ ಕಜೆಕಾರು ಗ್ರಾಮ ಸಮಿತಿ ಅಧ್ಯಕ್ಷ ಸಾದಿಕ್ ಕೆ.ಪಿ., ಎಸ್.ಡಿ.ಪಿ.ಐ. ದ.ಕ. ಜಿಲ್ಲಾ ಸಮಿತಿ ಸದಸ್ಯ ಯೂಸುಫ್ ಆಲಡ್ಕ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಹನೀಫ್ ಪುಂಜಾಲಕಟ್ಟೆ, ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯ ಇಮ್ರಾನ್ ಪಾಂಡವರಕಲ್ಲು, ಎಸ್.ಡಿ.ಪಿ.ಐ. ಬಂಟ್ವಾಳ ಪುರಸಭಾ ಸಮಿತಿ ಕಾರ್ಯದರ್ಶಿ ಇಕ್ಬಾಲ್ ಮೈನ್ಸ್, ಜಮಾಅತ್ ಮಾಜಿ ಅಧ್ಯಕ್ಷ ಪುತ್ತುಮೋನು ಕುದುರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News