ಬಾಗಲಕೋಟೆ: ಸಂಘಪರಿವಾರ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಸಿಪಿಐ ಅಮಾನತು

Update: 2022-10-09 14:42 GMT

ಬಾಗಲಕೋಟೆ, ಅ.9:ಸಂಘ ಪರಿವಾರ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಇಲ್ಲಿನ ಬಾದಾಮಿ ತಾಲೂಕು ಪೊಲೀಸ್ ಠಾಣೆಯ ಸಿಪಿಐ ಕರಿಯಪ್ಪ (CPI Kariyappa Banne) ಬನ್ನೆ ಅವರನ್ನು ಅಮಾನತು ಮಾಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ ಅವರು ಇಲಾಖೆ ವಿಚಾರಣೆ ಬಾಕಿ ಇಟ್ಟು ಅಮಾನತು ಮಾಡಿ ಆದೇಶಿಸಿದ್ದಾರೆ. ಕೇಂದ್ರಸ್ಥಾನ ಬಿಡಬಾರದು. ಒಂದು ವೇಳೆ ಕೇಂದ್ರಸ್ಥಾನ ಬಿಡುವುದಾದರೆ, ಅನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ.

ಸೆ.6 ರಂದು ಕೆರೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಸಿಪಿಐ ಕರಿಯಪ್ಪ ಬನ್ನೆ ಅವರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಶರಣು ಸಜ್ಜನ ಹಾಗೂ ಕೆಲವರನ್ನು ಬಂಧಿಸಲಾಗಿತ್ತು. ಅವರನ್ನು ಬಾದಾಮಿ ಠಾಣೆಗೆ ಕರೆ ತಂದು, ಅವರ ಮೇಲೆ ಲಾಠಿಯಿಂದ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಗಳು ಹಾಗೂ ಹಿಂದೂ ಜಾಗರಣ ವೇದಿಕೆ ಮುಖಂಡರು ಆರೋಪಿಸಿದ್ದರು. ಹಾಗಾಗಿ, ಸಿಪಿಐ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಜಿಲ್ಲೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ ಒಂದು ಕಡೆ ಮೀಸೆ ಬೋಳಿಸುತ್ತೇನೆ ಎಂದ ಬಿಜೆಪಿ ಶಾಸಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News