ತಾಂತ್ರಿಕ, ತಾಂತ್ರಿಕೇತರ ಸಂಸ್ಥೆಗಳಲ್ಲಿ ಹಿಂದಿ, ಸ್ಥಳೀಯ ಭಾಷೆಗಳನ್ನು ಬೋಧನಾ ಮಾಧ್ಯಮವಾಗಿಸಿ: ಸಂಸದೀಯ ಸಮಿತಿ ಶಿಫಾರಸು

Update: 2022-10-09 17:18 GMT
ಸಾಂದರ್ಭಿಕ ಚಿತ್ರ

ಬೆಂಗಳೂರು: ಐಐಟಿಗಳಂತಹ ತಾಂತ್ರಿಕ ಮತ್ತು ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಹಿಂದಿ ಮತ್ತು ಭಾರತದ ಇತರ ಭಾಗಗಳಲ್ಲಿ ಆಯಾ ಸ್ಥಳೀಯ ಭಾಷೆಗಳು ಬೋಧನಾ ಮಾಧ್ಯಮವಾಗಿರಬೇಕೆಂದು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. 

ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದಾಗಬೇಕೆಂದು ಸಹ ಸಮಿತಿ ಶಿಫಾರಸು ಮಾಡಿದೆ. ಕಳೆದ ತಿಂಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ತನ್ನ 11ನೆ ವರದಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಅಧಿಕೃತ ಭಾಷೆ ಕುರಿತ ಸಂಸದೀಯ ಸಮಿತಿಯು ಎಲ್ಲ ರಾಜ್ಯಗಳಲ್ಲಿ ಇಂಗ್ಲಿಷ್‍ಗಿಂತ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕೆಂದು ಶಿಫಾರಸು ಮಾಡಿದೆ. 

ದೇಶದ ಎಲ್ಲ ತಾಂತ್ರಿಕ ಮತ್ತು ತಾಂತ್ರಿಕೇತರ ಸಂಸ್ಥೆಗಳಲ್ಲಿ ಹಿಂದಿ ಅಥವಾ ಸ್ಥಳೀಯ ಭಾಷೆಯನ್ನು ಬೋಧನಾ ಮಾಧ್ಯಮವಾಗಿ ಬಳಸಬೇಕು ಮತ್ತು ಇಂಗ್ಲಿಷ್ ಬಳಕೆಯನ್ನು ಐಚ್ಛಿಕವಾಗಿಸಬೇಕೆಂದು ಸಮಿತಿಯು ಸೂಚಿಸಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News