ಅರಿವು ಸಾಲ ಅರ್ಜಿಯ ಅವಧಿ ವಿಸ್ತರಣೆ

Update: 2022-10-10 14:17 GMT

ಮಂಗಳೂರು, ಅ.10: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ ಜನಾಂಗದ 2022-23ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ/ ನೀಟ್ (M.B.B.S/B.D.S/Ayush/ Bachelor of Architecture/B.E/ B.Tech, B.Pharm, Pharm D) ವಿದ್ಯಾರ್ಥಿಗಳಿಗೆ ನಿಗಮದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಸಾಲ ಪಡೆಯಲು ಅಪೇಕ್ಷಿಸುವ ವಿದ್ಯಾರ್ಥಿಗಳು ನಿಗಮದ ವೆಬ್‌ಸ್ಶೆಟ್ kmdconline.karnataka.gov.in ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12ರಷ್ಟು ಪಾವತಿಸಬೇಕಾಗಿರುತ್ತದೆ. ಶೇ. 12ರಷ್ಟು ಮೊತ್ತವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು ಅಥವಾ ಜಿಲ್ಲಾ ಕಚೇರಿಯಲ್ಲೂ ಸಹ ಪಾವತಿಸಲು ಅವಕಾಶವಿರುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್-ಲೈನ್ ಮೂಲಕ 30.11.2022 ರೊಳಗೆ ಅರ್ಜಿ ಸಲ್ಲಿಸಬಹುದು.

ಕೆಎಂಡಿಸಿ ವೆಬ್‌ಸೈಟ್ kmdconline.karnataka.gov.inನಲ್ಲಿ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಇತರ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಮೌಲಾನಾ ಅಝಾದ್ ಭವನ ೨ನೇ ಮಹಡಿ, ಪಾಂಡೇಶ್ವರ, ಮಂಗಳೂರು -575001 ಈ ವಿಳಾಸಕ್ಕೆ ಸಲ್ಲಿಸಬೇಕು.

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ರೂ. 8,00,000 ಮಿತಿಯೊಳಗಿರಬೇಕು. *ಆಧಾರ್ ಮತ್ತು ರೇಶನ್ ಕಾರ್ಡ್ ಜೆರಾಕ್ಸ್ ಪ್ರತಿ *ಸಿಇಟಿ/ನೀಟ್ ಪರೀಕ್ಷೆ ಪ್ರವೇಶ ಪತ್ರ *ಎಸೆಸ್ಸೆಲ್ಸಿ ಮತ್ತು ಪಿಯುಸಿ ಅಂಕ ಪಟ್ಟಿಯ ದೃಢೀಕೃತ ಪ್ರತಿ *50 ರೂ.ನ ಇ-ಸ್ಟ್ಯಾಂಪ್‌ನೊಂದಿಗೆ ಇಂಡಿಮ್ನಿಟಿ ಬಾಂಡ್ *ಹಿಂದಿನ ವರ್ಷದ ಅಂಕ ಪಟ್ಟಿಯ ದೃಢೀಕೃತ ಪ್ರತಿ *ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ-2 * ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಸ್ಟಡಿ ಸರ್ಟಿಫಿಕೇಟ್, ಕಾಲೇಜಿನ ಬ್ಯಾಂಕ್ ಖಾತೆಯ ವಿವರ, ಫೀಸ್ ಸ್ಟಕ್ಚರ್ *ವಿದ್ಯಾರ್ಥಿ ಮತ್ತು ಪೋಷಕರ ಸ್ವಯಂ ಘೋಷಣಾ ಪತ್ರ *ಶೇ.12 ಪಾವತಿ ಮಾಡಿದ ರಶೀದಿ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News