ಹಾಸನ: ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಕಾರಿನಲ್ಲಿ ಮೃತದೇಹ ಪತ್ತೆ!

Update: 2022-10-11 13:29 GMT

ಹಾಸನ: ತಾಲೂಕಿನ ಶಾಂತಿಗ್ರಾಮದ ರೈಲ್ವೆ ಹಳಿಯ ಬಳಿ ಮಂಗಳವಾರ ಮಧ್ಯಾಹ್ನ ಕಾರೊಂದು ಉರುಳಿ ಬಿದ್ದಿದ್ದು, ಅದರಲ್ಲಿ ಮೃತದೇಹ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಬೆಣಗಟ್ಟೆ ಸಮೀಪದ ರೈಲ್ವೆ ಟ್ರ್ಯಾಕ್ ಮೇಲೆ ಬೊಲೆರೋ ವಾಹನವೊಂದು ಉರುಳಿಬಿದ್ದಿದೆ. ಅದರಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ಪೊಲೀಸ್ ತುರ್ತು ಸಂಖ್ಯೆಗೆ ಕರೆ ಮಾಡಿ ಸುದ್ದಿ ತಿಳಿಸಿದ್ದಲ್ಲದೆ ಕಾರಿನಲ್ಲಿದ್ದ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆನ್ನಲಾಗಿದೆ.

ಮೃತದೇಹ ಹಾಗೂ ಉರುಳಿಬಿದ್ದ ಕಾರಿನಲ್ಲಿ ಸಿಲುಕಿದ್ದ ಮೂವರನ್ನು ವಶಕ್ಕೆ ಪಡೆದ ಪೊಲೀಸರು,  ಮುಂದಿನ ವಿಚಾರಣೆಯೊಂದಿಗೆ ತನಿಖೆ ಆರಂಭಿಸಿದ್ದಾರೆ.

ಕಾರಿನಲ್ಲಿದ್ದವರು ರಾಷ್ಟ್ರೀಯ ಹೆದ್ದಾರಿ 75ರ ಬಳಿ ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದು, ಮೂವರು ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. 

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: ಚಿಕ್ಕಮಗಳೂರು: ಗರ್ಭಿಣಿ ಮಹಿಳೆಗೆ ಹಲ್ಲೆ ಮಾಡಿ, ದಲಿತ ಕೂಲಿ ಕಾರ್ಮಿಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ತೋಟದ ಮಾಲಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News