PSI ಮರುಪರೀಕ್ಷೆ: ಹೈಕೋರ್ಟ್ ತಡೆಯಾಜ್ಞೆ ಅ.19ರವರೆಗೆ ವಿಸ್ತರಣೆ
Update: 2022-10-11 17:46 GMT
ಬೆಂಗಳೂರು, ಅ.11: ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ 545 ಪಿಎಸ್ಸೈ ಹುದ್ದೆಗಳಿಗೆ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ಸರಕಾರ ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಅ.19ರವರೆಗೆ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಸರಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.
ನ್ಯಾಯಾಲಯದ ಮುಂದಿನ ಆದೇಶದವರೆಗೆ ಪಿಎಸ್ಸೈ ನೇಮಕಾತಿಗಾಗಿ ಮರು ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಬಾರದು ಎಂದು ಸರಕಾರಕ್ಕೆ ಸೂಚಿಸಿ, ಕಳೆದ ತಿಂಗಳು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಅ.19ರವರೆಗೂ ವಿಸ್ತರಿಸಿ ನ್ಯಾಯಪೀಠ ಆದೇಶಿಸಿದೆ.