ನನ್ನ ಹೆಸರೆತ್ತದೆ 5 ನಿಮಿಷ ಭಾಷಣ ಮಾಡಿ: ಬಿಎಸ್ ವೈ, ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಸವಾಲು

Update: 2022-10-12 12:09 GMT

ಬೆಂಗಳೂರು: ಜನಸಂಕಲ್ಪ ಯಾತ್ರೆ ಪ್ರಾರಂಭಿಸಿರುವ  ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಯಮ್ಮ ಎರಡು ಸವಾಲುಗಳನ್ನು ಹಾಕಿದ್ದಾರೆ. 

ಈ ಸಂಬಂಧ ಟ್ವೀಟ್  ಮಾಡಿರುವ ಅವರು, 1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. 2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ' ಎಂದು ಸವಾಲು ಹಾಕಿದ್ದಾರೆ.

'ಮುಖ್ಯಮಂತ್ರಿಗಳಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಯಡಿಯೂರಪ್ಪ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ' ಎಂದು ವ್ಯಂಗ್ಯವಾಡಿದ್ದಾರೆ.

''ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಬಿಎಸ್ವೈ ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು'' ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಟಿಪ್ಪು ಸುಲ್ತಾನ್ ಹೆಸರನ್ನು ಬದಲಾಯಿಸಿದ್ದೇನೆ: ಸಂಸದ ಪ್ರತಾಪ್ ಸಿಂಹ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News