ರಾಜ್ಯದಲ್ಲಿ ಇನ್ನೂ 2 ದಿನ ಧಾರಾಕಾರ ಮಳೆ ಸಾಧ್ಯತೆ; ಹವಾಮಾನ ಇಲಾಖೆ
Update: 2022-10-12 12:58 GMT
ಬೆಂಗಳೂರು, ಅ.12: ರಾಜ್ಯದಲ್ಲಿ ಇನ್ನೆರಡು ದಿನ ಧಾರಾಕಾರ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರ ಬೆಳಗ್ಗೆ 8.30ರ ತನಕ ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಬುಧವಾರ ಬೆಳಗ್ಗೆ 8.30ರ ತನಕ ಉತ್ತರ ಒಳನಾಡು, ಕರಾವಳಿ, ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 11 ಸೆಂ.ಮೀ ತನಕ ಮಳೆಯಾಗಿದೆ. ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಯಲ್ಲಿ ತಲಾ 7 ಸೆಂ.ಮೀ ತನಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.