ಉಳ್ಳಾಲ ಬ್ಯಾರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆಹ್ವಾನ
Update: 2022-10-13 17:11 GMT
ಮಂಗಳೂರು, ಅ.13: ಬ್ಯಾರಿ ಲೇಖಕರು-ಕಲಾವಿದರ ಕೂಟ ‘ಮೇಲ್ತೆನೆ’ಯ ವತಿಯಿಂದ ದೇರಳಕಟ್ಟೆಯ ಕಣಚೂರು ಪಬ್ಲಿಕ್ ಸ್ಕೂಲ್ ಕ್ಯಾಂಪಸ್‌ನಲ್ಲಿ ಅ.೧೫ರಂದು ನಡೆಯುವ ಬ್ಯಾರಿ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಅವರನ್ನು ಮೇಲ್ತೆನೆ ಮತ್ತು ಸಮ್ಮೇಳನದ ಸ್ವಾಗತ ಸಮಿತಿಯ ಪದಾಧಿಕಾರಿ ಗಳು ‘ಬಿಲಿ ಕಡ್ಲಾಸ್’ (ಆಮಂತ್ರಣ ಪತ್ರ)ವನ್ನು ನೀಡಿ ಅಧಿಕೃತವಾಗಿ ಆಹ್ವಾನಿಸಿದರು.
ಈ ಸಂದರ್ಭ ಸ್ವಾಗತ ಸಮಿತಿಯ ಅಧ್ಯಕ್ಷ ನಝೀರ್ ಉಳ್ಳಾಲ, ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ, ಮಾಜಿ ಅಧ್ಯಕ್ಷ ಮನ್ಸೂರ್ ಅಹ್ಮದ್ ಸಾಮಣಿಗೆ, ಬಶೀರ್ ಮೊಂಟೆಪದವು ಉಪಸ್ಥಿತರಿದ್ದರು.