ಪ್ರಶಸ್ತಿಗೆ ಅರ್ಜಿ ಆಹ್ವಾನ
Update: 2022-10-13 17:16 GMT
ಮಂಗಳೂರು, ಅ.13: ವಿಶ್ವ ವಿಕಲಚೇತನರ ದಿನಾಚರಣೆಯಂದು ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ, ಸಂಸ್ಥೆಗಳಿಗೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ ಹಾಗೂ ಸಲ್ಲಿಸಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಟ್ವಾರ, ಜಿಪಂ ಕಟ್ಟಡ, ಮಂಗಳೂರು ಅಥವಾ ಇಲಾಖೆಯ ವೆಬ್‌ಸೈಟ್ http://www.welfareofdisabled.kar.nic.in/ ಅಥವಾ www.dwdsc.kar.nic.in ಮೂಲಕ ಪಡೆದು, ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಅ.೨೧ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 0824- 2458173, 2455999ನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯ ಪ್ರಕಟನೆ ತಿಳಿಸಿದೆ.