ಚಿಕ್ಕಮಗಳೂರು: ದಂಡ ವಿಧಿಸಿದ್ದಕ್ಕೆ ನ್ಯಾಯಾಧೀಶರ ಮೇಲೆ ಚಪ್ಪಲಿ ತೂರಿದ ಆರೋಪಿ

Update: 2022-10-14 17:44 GMT
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು, ಅ.14: ಪ್ರಕರಣವೊಂದರಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದ ಆರೋಪಿಗೆ ನ್ಯಾಯಾಧೀಶರು ದಂಡ ವಿಧಿಸಿದ್ದರಿಂದ ಕುಪಿತಗೊಂಡ ಆರೋಪಿ ನ್ಯಾಯಾಲಯದ ಆವರಣಕ್ಕೆ ಕುಡಿದು ಬಂದು ನ್ಯಾಯಾಧೀಶರ ಮೇಲೆ ಚಪ್ಪಲಿ ತೂರಿದ ಘಟನೆ ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಕಿರಿಯ ಶ್ರೇಣಿ ವಿಭಾಗದಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಅರವಿಂದ ನಗರದ ನಿವಾಸಿಯಾಗಿರುವ ಲೋಕೇಶ್ ಕುಡಿದು ಮತ್ತಿನಲ್ಲಿ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿಯಾಗಿದ್ದಾನೆ. ಕಳೆದ ಒಂದು ತಿಂಗಳ ಹಿಂದೆ ಮದ್ಯಸೇವಿಸಿ ವಾಹನ ಚಾಲನೆ ಮಾಡುತ್ತಿದ್ದಾಗ ತಪಾಸಣೆಗೊಳಡಿಸಿದ ಪೊಲೀಸರು ಮದ್ಯಸೇವಿಸಿ ವಾಹನ ಚಾಲನೆ ಮಾಡುತ್ತಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ದಂಡ ಕಟ್ಟುವಂತೆ ಪೊಲೀಸರು ಸೂಚಿಸಿದ್ದರು.

ಅದರಂತೆ ನ್ಯಾಯಾಲಯದಲ್ಲಿ ಆರೋಪಿ ದಂಡ ಪಾವತಿಸಿದ್ದ. ದಂಡ ಪಾವತಿಸಿ ಒಂದು ತಿಂಗಳ ಬಳಿಕ ಶುಕ್ರವಾರ ನ್ಯಾಯಾಲಯಕ್ಕೆ ಕುಡಿದು ಬಂದ್ದಿದ್ದ ಆರೋಪಿ ಲೋಕೇಶ್, ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿದ್ದಾನೆ. ಈ ವೇಳೆ ನಾನೇನು ತಪ್ಪು ಮಾಡಿದ್ದೇನೆಂದು ದಂಢ ಹಾಕಿದ್ದೀರಾ ಎಂದು ಕೂಗಾಡಿದ್ದಾನೆ. ಸ್ಥಳದಲ್ಲಿದ್ದ ವಕೀಲರು ಈತನ ವರ್ತನೆಗೆ ಆಕೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲಿದ್ದ ನಗರದ ಪೊಲೀಸ್ ಠಾಣೆಯ ಪೊಲೀಸರು ಲೋಕೇಶ್‍ನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News