ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ನೇಮಕಗೊಳಿಸುವ ವಿಚಾರ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Update: 2022-10-15 08:40 GMT

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪೋಕ್ಸೋ ಪ್ರಕರಣದಡಿ ಬಂಧಿಯಾಗಿರುವ ಚುತ್ರದುರ್ಗದ ಮುರುಘಾ ಮಠದ ಮುರುಘಾ ಶರಣರು ಪೀಠದಿಂದ ಕೆಳಗಿಳಿಯಬೇಕು. ನೂತನ ಪೀಠಾಧಿಪತಿ ನೇಮಕವಾಗಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮಾಜದ ಮುಖಂಡರ ನಿಯೋಗವೊಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ. 

ಈ ಕುರಿತು ಇಂದು ಮಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನಿನ ಚೌಕಟ್ಟಿನೊಳಗೆ ಕ್ರಮ ಕೈಗಳ್ಳುವುದಾಗಿ ತಿಳಿಸಿದರು. 

''ಮಾಜಿ ಸಚಿವ ಏಕಾಂತಯ್ಯ ಅವರ ನೇತೃತ್ವದಲ್ಲಿ ಭಕ್ತಮಂಡಳಿಯ ಸರ್ವರೂ ಬಂದು ಭೇಟಿಯಾಗಿದ್ದಾರೆ. ಅಲ್ಲಿನ ವಿಚಾರಗಳೆಲ್ಲವನ್ನೂ ತಿಳಿಸಿದ್ದಾರೆ. ಮಠದ ಆಡಳಿತಕ್ಕೆ ಆಗುತ್ತಿರುವ ತೊಂದರೆಯ ಬಗ್ಗೆ ವಿವರಿಸಿದ್ದಾರೆ . ಮಠದ ಟ್ರಸ್ಟ್ ಇದ್ದು,  ಕಾನೂನಿನ ಚೌಕಟ್ಟಿನೊಳಗೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು''ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News