ಮೂಡ ಕಚೇರಿ ಕಡತಗಳ ವಿಲೇವಾರಿಯಲ್ಲಿ ನ್ಯೂನತೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಲೋಕಾಯುಕ್ತ ಅಧಿಕಾರಿಗಳಿಂದ ವರದಿ

Update: 2022-10-15 15:28 GMT

ಮಂಗಳೂರು, ಅ.15: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕಚೇರಿಯಲ್ಲಿ ಕಡತಗಳ ವಿಲೇವಾರಿಯಲ್ಲಿ ಹಲವು ನ್ಯೂನತೆಗಳು ಕಂಡು ಬಂದಿದ್ದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಲೋಕಾಯುಕ್ತ ಅಧಿಕಾರಿಗಳು ವರದಿ ಸಲ್ಲಿಸಲಿದ್ದಾರೆ.

ಅರ್ಜಿಗಳ ವಿಲೇವಾರಿಯಲ್ಲಿನ ವಿಳಂಬ ಮತ್ತು ಮಧ್ಯವರ್ತಿಗಳ ಹಾವಳಿ ಬಗ್ಗೆ ಲಿಖಿತವಾಗಿ, ಮೌಖಿಕವಾಗಿ ದೂರುಗಳು, ಗುಪ್ತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿ ಮತ್ತು ಸಿಬ್ಬಂದಿ ತಂಡ ಅ.11ರಿಂದ 14ರವರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದೆ.

ಆಗ ಕಡತಗಳ ವಿಲೇವಾರಿಗೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿರುವುದು, ಅರ್ಜಿದಾರರಿಗೆ ಕಡತಗಳ ವಿಲೇವಾರಿ ಪ್ರಗತಿಯ ಬಗ್ಗೆ ನಿಯಮಬದ್ಧವಾಗಿ ಮಾಹಿತಿ ನೀಡದಿರುವುದು ಕಂಡುಬಂದಿದೆ. ಅರ್ಜಿಗಳ ವಿಲೇವಾರಿಯಲ್ಲಿ ಕರ್ತವ್ಯಲೋಪ, ನಿರ್ಲಕ್ಷ್ಯತನ ಎಸಗಿರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಎಸ್‌ಪಿ ಲಕ್ಷ್ಮೀ  ಗಣೇಶ್ ಕೆ. ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News