ಓಮ್ನಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು
Update: 2022-10-15 15:56 GMT
ಮಂಗಳೂರು, ಅ.15: ಓಮ್ನಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಆಕಾಶಭವನದ ಬಳಿ ಸಂಭವಿಸಿದೆ.
ಸದಾಖತ್ (40) ಮೃತಪಟ್ಟವರು. ಅವರು ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಇಳಿಜಾರಿನಲ್ಲಿ ಹಿಂದಿನಿಂದ ಬಂದ ಓಮ್ನಿ ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಅನಂತರ ಆವರಣ ಗೋಡೆಗೆ ಢಿಕ್ಕಿ ಹೊಡೆಯಿತು. ದ್ವಿಚಕ್ರ ವಾಹನ ಅದರ ನಡುವೆ ಸಿಲುಕಿ ಸದಾಖತ್ ಗಂಭೀರವಾಗಿ ಗಾಯಗೊಂಡರು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ. ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ