ಚಾಮರಾಜನಗರ: ಬೈಕ್‌ಗಳ ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ

Update: 2022-10-16 03:22 GMT

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣ ಹಾಗೂ ಇತರ ಸ್ಥಳಗಳಲ್ಲಿ ನಿಲ್ಲಿಸಿರುವ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸಂಜಯ್, ನಂದನ್ ಹಾಗೂ ರವಿಕುಮಾರ್ ಎಂಬವರನ್ನು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ 16 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೊಳ್ಳೇಗಾಲ ಪಟ್ಟಣ ಠಾಣೆಯ ಸಬ್ ಇನ್ಸ್ ಪೆಕ್ಟರ್  ಚೇತನ್ ಅವರು ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಸಬ್ ಇನ್ಸ್ ಪೆಕ್ಟರ್ ಚೇತನ್ ಹಾಗೂ ತಂಡದ ಕಾಯ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಡಿ.ವೈ.ಎಸ್.ಪಿ ನಾಗರಾಜು ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News