ಹೋರಾಟಗಾರರ ಮನೆಗೆ ರಾತ್ರಿ ತೆರಳಿ ನೋಟಿಸ್ ನೀಡಿರುವ ಕ್ರಮ ಸರಿಯಲ್ಲ: ನಳಿನ್ ಕುಮಾರ್ ಕಟೀಲು
ಮಂಗಳೂರು, ಅ.16: ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಹೋರಾಟಗಾರರ ಮನೆಗೆ ರಾತ್ರಿ ತೆರಳಿ ಪೊಲೀಸರು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಹಾಗೆ ಒಂದು ವೇಳೆ ಅಧಿಕಾರಿಗಳು ರಾತ್ರಿ ತೆರಳಿ ಹೋರಾಟಗಾರರ ಮನೆಗೆ ತೆರಳಿ ನೋಟಿಸ್ ನೀಡಿದ್ದರೆ ಅದು ಸರಿಯಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಂಸದರು, ಕೆಲವೊಂದು ತಾಂತ್ರಿಕ ಕಾರಣಗಳಿಂದ ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯ ವಿಳಂಬವಾಗಿದೆ. ಈ ಟೋಲ್ ಗೇಟ್ ತೆರವುಗೊಳಿಸುವ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆದಿದೆ. ಆದರೆ ಟೋಲ್ ಗೇಟ್ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುವ ಯಾವ ಉದ್ದೇಶ ನಮಗಿಲ್ಲ. ಹೋರಾಟಗಾರರ ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದರು.
ಕೆಲವೊಂದು ತಾಂತ್ರಿಕ ಕಾರಣಗಳಿಂದ ತೆರವು ಕಾರ್ಯಾಚರಣೆ ವಿಳಂಬವಾಗಿದೆ. ಹೋರಾಟಗಾರರು ಇದನ್ನು ಅರ್ಥ ಮಾಡಿಕೊಂಡು ಸ್ವಲ್ಪ ಕಾಲಾವಕಾಶ ನೀಡುವ ಅಗತ್ಯವಿದೆ ಎಂದು ಮನವಿ ಮಾಡುವುದಾಗಿ ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಇದನ್ನೂ ಓದಿ: ಮುಚ್ಚಳಿಕೆ ಬರೆದುಕೊಡುವುದಿಲ್ಲ, ಅ.18ರ ಹೋರಾಟ ನಿಲ್ಲುವುದಿಲ್ಲ: ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿ