ಯತ್ನಾಳ್ ನಮ್ಮ ನಾಯಕನಲ್ಲ, ಬೆಲ್ಲದ್ ಹೇಳಿಕೆ ಒಪ್ಪಲ್ಲ: BJP ರಾಜ್ಯ ಉಸ್ತುವಾರಿ ಅರುಣ್ ಸಿಂಗ್

Update: 2022-10-16 17:21 GMT

ಹುಬ್ಬಳ್ಳಿ, ಅ.16: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ನಾಯಕನಲ್ಲ.ಇನ್ನೂ, ಮುಸ್ಲಿಮರ ಮೀಸಲಾತಿ ಕುರಿತು ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ಒಪ್ಪುವುದಿಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಲ್ಲ. ಅವರ ಸ್ವಭಾವವೇ ಹಾಗೇ. ಅವರ ಹೇಳಿಕೆಗಳಿಗೆ ಹೆಚ್ಚು ಮಹತ್ವ ಕೊಡುವ ಅವಶ್ಯಕತೆ ಇಲ್ಲ. ಇನ್ನೂ, ಶಾಸಕ ಅರವಿಂದ ಬೆಲ್ಲದ ಮುಸ್ಲಿಮ್ ಸಮುದಾಯಕ್ಕೆ ಮೀಸಲಾತಿ ತೆಗೆದು ಹಾಕಬೇಕೆಂಬ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದರು.

ಈಗಾಗಲೇ ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ ನಡೆದಿದೆ. ಹಲವು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಅದೇ ರೀತಿ ಕರ್ನಾಟಕದಲ್ಲಿ ಸಹ ಬಿಜೆಪಿ 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯ ಸಾಧಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ 2013ರ ಇತಿಹಾಸ ನಿರ್ಮಾಣವಾಗುತ್ತೆ ಎನ್ನುವುದು ಆಧಾರರಹಿತ. ದೇಶದಲ್ಲಿ ಕಾಂಗ್ರೆಸ್ ಸೋಲಿನ ಅಲೆ ಆರಂಭವಾಗಿದೆ. ಬಿಜೆಪಿ ಗೆಲುವಿನ ಅಲೆ ಎದ್ದಿದೆ. ರಾಹುಲ್ ಗಾಂಧಿ ದೇಶದಲ್ಲಿ ಮಾಡುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಯಾವುದೇ ವಿಶೇಷವಿಲ್ಲ. ಸುಮ್ಮನೆ ಬೆಳಿಗ್ಗೆ ಮತ್ತು ಸಂಜೆ ವಾಕಿಂಗ್ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ವಿಪಕ್ಷಗಳಿಗೆ ಮಾತನಾಡಲು ಯಾವುದೇ ವಿಷಯಗಳಿಲ್ಲದ ಕಾರಣ, ಸುಮ್ಮನೆ ಬಿಜೆಪಿ ವಿರುದ್ಧ ಹಾರಿಕೆ ಟೀಕೆಗಳನ್ನು ಮಾಡುತ್ತಾ ಓಡಾಡುತ್ತಿದ್ದಾರೆ. ಇದು ಭಾರತ ಜೋಡೋ ಯಾತ್ರೆ ಅಲ್ಲ. ಡಿಕೆಶಿ ಮತ್ತು ಸಿದ್ದರಾಮಯ್ಯ ಜೋಡಿಸುವ ಜೋಡೋ ಯಾತ್ರೆ ಎಂದು ವ್ಯಂಗ್ಯವಾಡಿದರು.

ಇದ್ನನೂ ಓದಿ>>> 'ಭಾರತ್ ಜೋಡೊ' ಯಾತ್ರೆ ಬಳಿಕ 'ಬಸ್ ಯಾತ್ರೆ'ಗೆ ನಿರ್ಧಾರ: ಡಿ.ಕೆ.ಶಿವಕುಮಾರ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News