ಯಾವುದೇ ಸಂಶಯ ಬೇಡ, ಕ್ಷೇತ್ರ ಬಿಟ್ಟು ಎಲ್ಲೂ ಹೋಗಲ್ಲ: ಸಚಿವ ನಿರಾಣಿ
Update: 2022-10-16 16:00 GMT
ಬಾಗಲಕೋಟೆ, ಅ. 16: ಜಿಲ್ಲೆಯ ಬೀಳಗಿ ಕ್ಷೇತ್ರ ಬಿಟ್ಟು ನಾನು ಎಲ್ಲೂ ಹೋಗಲ್ಲ. ನೂರಕ್ಕೆ ನೂರು ಬೀಳಗಿಯಿಂದಲೇ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಎಂಎಎಲ್‍ಎ ಮಾಡಿದವರು ಬೀಳಗಿ ಕ್ಷೇತ್ರದ ಜನ. ನಾನು ಮಂತ್ರಿ ಆಗಿದ್ದು ನಾನು ಕೊನೆವರೆಗೂ ಬೀಳಗಿಯಲ್ಲೆ ಇರುತ್ತೇನೆ. ಯಾವುದೇ ಸಂಶಯ ಬೇಡ ಎಂದು ಅವರು ತಿಳಿಸಿದರು.
ನಮ್ಮ ಕುಟುಂಬದಲ್ಲಿ ಒಬ್ಬರೆ ಸ್ಪರ್ಧೆ ಮಾಡುತ್ತಾರೆ. ನೂರಕ್ಕೆ ನೂರರಷ್ಟು ಹೇಳುತ್ತೇನೆ ಕುಟುಂಬದಿಂದ ಒಬ್ಬರು ಮಾತ್ರ ಸ್ಪರ್ಧೆ ಮಾಡುತ್ತಾರೆ. ಒಂದು ವೇಳೆ ಮುಂದಿನ ಸಲ ನಮ್ಮ ಕುಟುಂಬದಿಂದ ಬೇರೆ ಯಾರಾದರೂ ಸ್ಪರ್ಧೆ ಮಾಡಿದರೆ ನಾನು ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.