ಮಳವಳ್ಳಿ: ಕೆರೆ ನಿರ್ಮಾತೃ ಕಾಮೇಗೌಡ ನಿಧನ

Update: 2022-10-17 06:27 GMT

ಮಂಡ್ಯ, .17: ಆಧುನಿಕ ಭಗೀರಥ ಹಾಗೂ ಕೆರೆಗಳ ಮನುಷ್ಯರೆಂದೇ ಖ್ಯಾತರಾಗಿರುವ ಕಾಮೇಗೌಡ (83) ಇಂದು (ಸೋಮವಾರ)  ಮುಂಜಾನೆ ಅನಾರೋಗ್ಯದಿಂದ ನಿಧನರಾದರು.

ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳು ಕಾಮೇಗೌಡರನ್ನು ಗೌರವಿಸಿತ್ತು.

ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, 2020ರಲ್ಲಿ ‘ಮನ್​ ಕಿ ಬಾತ್​’ನಲ್ಲಿ ಕಾಮೇಗೌಡರನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದರು. 

ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ, ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಿಎಂ ಬೊಮ್ಮಾಯಿ ಸಂತಾಪ:  'ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು15 ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಶ್ರೀ ಕಾಮೇಗೌಡರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ. 

ಇದನ್ನೂ ಓದಿ: ಕೊರೋನ ಗೆದ್ದು ಬಂದು ಗುಡಾರದಲ್ಲಿ ಮಲಗಿರುವ ಕೆರೆ ಕಾಮೇಗೌಡ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News