ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ; ಸಹೋದರರಿಬ್ಬರ ಬಂಧನ
Update: 2022-10-17 15:03 GMT
ಬಂಟ್ವಾಳ, ಅ.17: ಸಾರ್ವಜನಿಕ ಸ್ಥಳದಲ್ಲಿ ಗಾಂಜ ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಬಂಟ್ವಾಳ ನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪರ್ಲಿಯಾ ನಿವಾಸಿಗಳಾದ ಉಮ್ಮರ್ ಸಿಯಾಫ್, ಅಹ್ಮದ್ ಸೈಫ್ ಬಂಧಿತ ಆರೋಪಿಗಳು.
ಆರೋಪಿಗಳಿಬ್ಬರು ಪರ್ಲಿಯಾ ಮದ್ದ ಎಂಬಲ್ಲಿ ರಸ್ತೆ ಬದಿಯಲ್ಲಿ ಗಾಂಜಾ ಸೇವನೆ ಮಾಡುವುದು, ಸಾರ್ವಜನಿಕರಿಗೆ ತೊಂದರೆ ಮಾಡುತ್ತಾ ಅಶಾಂತಿ ಹಬ್ಬಿದ ಹಿನ್ನೆಲೆಯಲ್ಲಿ ಸ್ಥಳೀಯರು ಅವರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು ಖಾತರಿಯಾದ ಬಳಿಕ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.