ಹಸಿರು ಪಟಾಕಿಗೆ ಮಾತ್ರ ಅನುಮತಿ: ಮಾಲಿನ್ಯ ನಿಯಂತ್ರಣ ಮಂಡಳಿ

Update: 2022-10-17 17:05 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.17: ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮಕ್ಕೆ ಮುಂದಾಗಿದ್ದು, ಹಸಿರು ಪಟಾಕಿ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ ಹಸಿರು ಪಟಾಕಿಯನ್ನು ಹೊರತುಪಡಿಸಿ ಬೇರೆ ಪಟಾಕಿ ಇಡುವುದು ಕಂಡುಬಂದರೆ ಮುಲಾಜಿಲ್ಲದೇ ಜಪ್ತಿ ಮಾಡುವಂತೆ ರಾಜ್ಯದ ಎಲ್ಲ ಜಿಲ್ಲೆಗಳ ಡಿಸಿಗಳಿಗೆ, ಪೊಲೀಸ್, ಅಗ್ನಿ ಶಾಮಕ ಇಲಾಖೆಗೆ ಮತ್ತು ಬಿಬಿಎಂಪಿಗೆ ಸೂಚನೆ ನೀಡಿದೆ.

ಪರಿಸರ ಸ್ನೇಹಿ ಪಟಾಕಿಗಳನ್ನು ಮಾತ್ರ ಸಿಡಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ರಾಜಧಾನಿ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೆಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನು ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ ಎಂದು ಮಂಡಳಿ ಮಾಹಿತಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News