ಎಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿ: ನ.30 ಕೊನೆ ದಿನ

Update: 2022-10-17 17:08 GMT

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶಾವಕಾಶದ ಕೊನೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ನವೆಂಬರ್ 30ರವರೆಗೆ ವಿಸ್ತರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ  ಸೋಮವಾರ ತಿಳಿಸಿದ್ದಾರೆ.

ಈ ಮುನ್ನ ಎಐಸಿಟಿಇ ನಿಗದಿ ಮಾಡಿದ್ದ ಪ್ರಕಾರ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಅಕ್ಟೋಬರ್ 25 ಕೊನೆಯ ದಿನವಾಗಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿ ಸುಪ್ರೀಂಕೋರ್ಟಿನ ಮೊರೆ ಹೋಗಿತ್ತು. ಈ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ ಎಂದು ಅವರು ಹೇಳಿದ್ದಾರೆ.

ಹೀಗಾಗಿ ನಮಗೆ ಒಂದು ತಿಂಗಳಿಗಿಂತ ಹೆಚ್ಚು ಕಾಲಾವಕಾಶ ಸಿಕ್ಕಿದೆ. ಇಷ್ಟರಲ್ಲಿ ನಾವು ಸುಗಮ ಕೌನ್ಸೆಲಿಂಗ್ ಸೇರಿದಂತೆ ಪ್ರವೇಶ ಪ್ರಕ್ರಿಯೆ ಮುಗಿಸಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಳೆದ ವರ್ಷ ಪಿಯುಸಿ ಪಾಸಾದ 24 ಸಾವಿರ ಅಭ್ಯರ್ಥಿಗಳು ಈ ವರ್ಷ ಸಿಇಟಿ ಬರೆದು, ರ್ಯಾಂಕಿಂಗ್ ನೀಡುವ ವಿಚಾರದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಸ್ವಲ್ಪ ಅಡಚಣೆ ಎದುರಾಯಿತು. ಹೀಗಾಗಿ ಅಂತಿಮ ದಿನಾಂಕ ವಿಸ್ತರಿಸುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಕೇಳಿಕೊಂಡಿದ್ದೆವು ಎಂದು ಅವರು ವಿವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News