ಚಿಕ್ಕಮಗಳೂರು: ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ
Update: 2022-10-18 17:03 GMT
ಚಿಕ್ಕಮಗಳೂರು: ಜಿಲ್ಲೆಯ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕೆ.ಎನ್.ಜಯಣ್ಣ ಅವರು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಮಂಗಳವಾರ ಸಿಕ್ಕಿಬಿದ್ದಿದ್ದಾರೆ.
ಲಿಂಗ್ಲಾಪುರ ಶಾಲೆಯಿಂದ ಬಿಡುಗಡೆಗೊಳಿಸಲು ರಾಜಪ್ಪ ಅವರಿಗೆ 15 ಸಾವಿರ ರೂ. ಲಂಚ ನೀಡುವಂತೆ ಜಯಣ್ಣ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಅದರಂತೆ ಇಂದು ಕಡೂರು ತಾಲೂಕಿನ ಜಿ.ತಿಮ್ಮಾಪುರ ಗೇಟ್ ಬಳಿ ಲಂಚ ಪಡೆಯುವಾಗ ಲೋಕಾಯುಕ್ತ ಡಿ.ವೈ.ಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ ಲಂಚದ ಹಣವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.