ಮಠದಲ್ಲಿ ಅನಧಿಕೃತವಾಗಿ ಮಕ್ಕಳನ್ನು ಇಟ್ಟುಕೊಂಡ ಆರೋಪ: ಮುರುಘಾ ಶ್ರೀ ವಿರುದ್ಧ ಮತ್ತೊಂದು FIR

Update: 2022-10-19 06:43 GMT
ಮುರುಘಾ ಶ್ರೀ 

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪೊಕ್ಸೊ ಪ್ರಕರಣದಡಿ ಬಂಧಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿರುವುದು ವರದಿಯಾಗಿದೆ. 

ಮುರುಘಾ ಮಠದಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಅನಧಿಕೃತವಾಗಿ ಇಟ್ಟುಕೊಂಡಿರುವ ಆರೋಪಕ್ಕೆ ಸಂಬಂಧಿಸಿ ಚಿತ್ರದುರ್ಗ ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಮುರುಘಾ ಶ್ರೀ ಸೇರಿ ನಾಲ್ವರ ವಿರುದ್ಧ ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ‌ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕ (Chitradurga child welfare committee )  ನೀಡಿದ ದೂರಿನ ಆಧಾರದಲ್ಲಿ ಮುರುಘಾ ಮಠದ ಟ್ರಸ್ಟ್‌ ಅಧ್ಯಕ್ಷರಾಗಿರುವ ಶಿವಮೂರ್ತಿ ಮುರುಘಾ ಶರಣರು, ಕಾರ್ಯದರ್ಶಿಯಾಗಿದ್ದ ಪರಮಶಿವಯ್ಯ, ಹಾಸ್ಟೆಲ್‌ನ ಮಹಿಳಾ ವಾರ್ಡನ್‌ ಹಾಗೂ ಮಡಿಲು ದತ್ತು ಕೇಂದ್ರದ ವ್ಯವಸ್ಥಾಪಕಿ  ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮುರುಘಾಶ್ರೀ ವಿರುದ್ಧದ ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಮಠದ ಹಾಸ್ಟೆಲ್​​​ಗೆ ಇತ್ತೀಚೆಗೆ ಅಧಿಕಾರಿಗಳು ಭೇಟಿ ನೀಡಿದ್ದ ವೇಳೆ ಅಲ್ಲಿ ಇಬ್ಬರು ಬಾಲಕಿಯರು ಪತ್ತೆಯಾಗಿದ್ದರೆನ್ನಲಾಗಿದೆ. CWC ಗಮನಕ್ಕೆ ತರದೆ ಇಬ್ಬರು ಮಕ್ಕಳ ಪಾಲನೆ ಮಾಡುತ್ತಿರುವ ಆರೋಪ ಹಿನ್ನೆಲೆ CWC ಅಧಿಕಾರಿಗಳು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ‌ ಕೇಸ್ ದಾಖಲಿಸಿದ್ದರು. CWC ಅಧಿಕಾರಿಗಳ ದೂರಿನನ್ವಯ ಕಾನೂನು ಸಲಹೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. 

ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಮೂರನೇ ಪ್ರಕರಣ ಇದಾಗಿದೆ.

''ಮಠದ ಆವರಣದಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗು ಹಾಗೂ ಹಾಸ್ಟೆಲ್‌ನಲ್ಲಿದ್ದ 17 ವರ್ಷದ ಅನಾಥ ಬಾಲಕಿಗೆ ಸಂಬಂಧಿಸಿದ ಮಾಹಿತಿಯನ್ನು ಸರಕಾರಕ್ಕೆ ನೀಡದೆ ಅನಧಿಕೃತವಾಗಿ ಇಟ್ಟುಕೊಂಡಿದ್ದಾರೆ. ಇತ್ತೀಚೆಗೆ ಮಠದ ಹಾಸ್ಟೆಲ್ ನಿಂದ ಮಕ್ಕಳನ್ನು ಬೇರೆಡೆ ಸ್ಥಳಾಂತರ ವೇಳೆ ಪತ್ತೆ ಆಗಿದ್ದಾರೆ. ಇದೊಂದು ಷಡ್ಯಂತ್ರ ಆಗಿದ್ದು, ಈ ಬಗ್ಗೆ ತನಿಖೆಗೆ ಆಗ್ರಹಿಸುತ್ತೇನೆ''

- ಮಧುಕುಮಾರ್, ಸಾಮಾಜಿಕ ಕಾರ್ಯಕರ್ತ

ಇದನ್ನೂ ಓದಿ: ನಿವೃತ್ತ ನ್ಯಾಯಮೂರ್ತಿ ಎಸ್‌.ಬಿ.ವಸ್ತ್ರಮಠ್ ​ಗೆ ಪವರ್ ಆಫ್​ ಅಟಾರ್ನಿ ನೀಡಿದ ಮುರುಘಾಶ್ರೀ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News