ಮಳವಳ್ಳಿ ಅತ್ಯಾಚಾರ, ಕೊಲೆ ಪ್ರಕರಣ: ಮೃತ ಬಾಲಕಿಯ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

Update: 2022-10-19 08:12 GMT

ಅತ್ಯಾಚಾರ ಮತ್ತು ಕೊಲೆಗೀಡಾದ ಮಂಡ್ಯ ಜಿಲ್ಲೆ ಮಳವಳ್ಳಿಯ ಬಾಲಕಿಯ ಮನೆಗೆ ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದೆ.
ಇಂಥಾ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಬೇಕು. ಆಗ ಮಾತ್ರ ಅತ್ಯಾಚಾರದಂತ ರಾಕ್ಷಸಿ ಕೃತ್ಯಗಳನ್ನು ತಡೆಗಟ್ಟಲು ಸಾಧ್ಯ. pic.twitter.com/X4PEDCRksT

— Siddaramaiah (@siddaramaiah) October 19, 2022

ಮಂಡ್ಯ: ಇತ್ತೀಚೆಗೆ ಅತ್ಯಚಾರಕ್ಕೆ ಒಳಗಾಗಿ ಮೃತಪಟ್ಟ ಮಳವಳ್ಳಿಯ ಬಾಲಕಿಯ ಮನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. 

''ಇಂಥಾ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಬೇಕು. ಆಗ ಮಾತ್ರ ಅತ್ಯಾಚಾರದಂತ ರಾಕ್ಷಸಿ ಕೃತ್ಯಗಳನ್ನು ತಡೆಗಟ್ಟಲು ಸಾಧ್ಯ' ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಸರಕಾರವನ್ನು ಆಗ್ರಹಿಸಿದ್ದಾರೆ. 

ಅ.11 ರಂದು ಟ್ಯೂಷನ್ ಗೆ ಹೋಗಿದ್ದ ಬಾಲಕಿಯ ಮೃತದೇಹ ಪಟ್ಟಣದ ಮೈಸೂರು ಮುಖ್ಯರಸ್ತೆಯ ಬದಿಯಲ್ಲಿರುವ ಜನದಟ್ಟಣೆಯಿಂದ ಕೂಡಿರುವ ಬೇಕರಿಯೊಂದರ ಹಿಂಭಾಗದ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಟ್ಯೂಷನ್ ನಡೆಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News