ಕನ್ನಡಿಗರಿಗೂ ಇದು ಹೆಮ್ಮೆಯ ಸಂಗತಿ: ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ, ಡಿಕೆಶಿ

Update: 2022-10-19 09:47 GMT

Heartiest congratulations to newly elected @INCIndia President Shri Mallikarjun @kharge.

His experience, commitment & insights will drive Congress in the right direction.

It is a proud moment for all Kannadigas.#AICCPresidentElection pic.twitter.com/ChKo2NEY5M

— Siddaramaiah (@siddaramaiah) October 19, 2022

ಬೆಂಗಳೂರು: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ''ಪ್ರತಿಭೆ ಮತ್ತು ಅನುಭವವನ್ನು‌ ಮೈಗೂಡಿಸಿಕೊಂಡ ಖರ್ಗೆಯವರಿಗೆ ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಇದೆ. ಖರ್ಗೆಯವರ ಆಯ್ಕೆ ಕನ್ನಡಿಗರಿಗೂ ಹೆಮ್ಮೆಯ‌ ಸಂಗತಿ. ಅವರಿಗೆ ಹಾರ್ದಿಕ ಅಭಿನಂದನೆಗಳು'' ಎಂದು ತಿಳಿಸಿದ್ದಾರೆ. 

''ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಕಾಂಗ್ರೆಸ್‌ ಪಕ್ಷ ಇನ್ನಷ್ಟು ಎತ್ತರಕ್ಕೇರಲಿದೆ ಎನ್ನುವ ವಿಶ್ವಾಸವಿದೆ'' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News