ಇದು ಕರ್ನಾಟಕಕ್ಕೆ ಹೆಮ್ಮೆಯ ಮತ್ತು ಐತಿಹಾಸಿಕ ಕ್ಷಣ: ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ ಸಲ್ಲಿಸಿದ ಎಚ್.ಡಿ ದೇವೇಗೌಡ

Update: 2022-10-19 10:48 GMT
photo - twitter 

ಬೆಂಗಳೂರು: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅಭಿನಂದನೆ ಸಲ್ಲಿಸಿದ್ದಾರೆ.  

''ನನ್ನ ಹಳೆಯ ಗೆಳೆಯ ಮತ್ತು ಸಹೋದ್ಯೋಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಖರ್ಗೆ ಅವರ ಆಯ್ಕೆ ಕಾಂಗ್ರೆಸ್ ಮತ್ತು ಕರ್ನಾಟಕಕ್ಕೆ ಹೆಮ್ಮೆಯ ಮತ್ತು ಐತಿಹಾಸಿಕ ಕ್ಷಣವಾಗಿದೆ. ಅವರ ಅಧಿಕಾರವಧಿಯಲ್ಲಿ ಪಕ್ಷವನ್ನು ದೇಶಾದ್ಯಂತ ಎತ್ತರಕ್ಕೆ ಕೊಂಡೊಯ್ಯಲು ದೇವರು ಅವರಿಗೆ ಶಕ್ತಿಯನ್ನು ನೀಡಿ ಅನಿಗ್ರಹಿಸಲಿ'' ಎಂದು ತಿಳಿಸಿದ್ದಾರೆ. 

► ಕುಮಾರಸ್ವಾಮಿ ಅಭಿನಂದನೆ:  ''ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ರಾಜ್ಯದ ಹಿರಿಯ ರಾಜಕಾರಣಿ, ಕಾಂಗ್ರೆಸ್ ಪಕ್ಷದ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಶ್ರೀ ಖರ್ಗೆ ಅವರದ್ದು ಸುದೀರ್ಘ ರಾಜಕೀಯ ಅನುಭವ. ಅಚಲವಾದ ಪಕ್ಷನಿಷ್ಠೆ ಅವರನ್ನು ಈ ಉನ್ನತ ಹುದ್ದೆವರೆಗೂ ತಂದಿದೆ. ಶ್ರೀ ಖರ್ಗೆ ಅವರಿಂದ ಆ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ'' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News