ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2022-10-19 14:37 GMT

ಬೆಂಗಳೂರು, ಅ.19: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುರುವಾರ ಬೆಳಗ್ಗೆ 8.30ರವರೆಗೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

ಬೆಂಗಳೂರು ನಗರದಲ್ಲಿ ಗುರುವಾರ ಬೆಳಗ್ಗೆ 8.30ರವರೆಗೆ ಸಾಮಾನ್ಯವಾಗಿ ಮೋಡ ಕವಿತ ವಾತಾವರಣವಿರಲಿದ್ದು, ಕೆಲವು ಬಾರಿ ಮಳೆ, ಗುಡುಗಿನಿಂದ ಕೂಡಿದ ಮಳೆ, ಒಮ್ಮೊಮ್ಮೆ ಭಾರೀ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ತಿಳಿಸಿದೆ. 

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ, ದಾಖಲೆ ಮಳೆ ಎಲ್ಲೆಲ್ಲಿ: ಬುಧವಾರ ಬೆಳಗ್ಗೆ 8.30ರವರೆಗೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯಲ್ಲಿ 12 ಸೆಂಟಿ ಮೀಟರ್ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು 8, ತುಮಕೂರು ಜಿಲ್ಲೆಯ ಮಧುಗಿರಿ, ಬೆಂಗಳೂರು ನಗರ ಜಿಲ್ಲೆಯ ಹೆಸರಘಟ್ಟ ತಲಾ 7 ಸೆಂಟಿ ಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News