ಅತ್ಯಾಚಾರ ಆರೋಪ ಸಾಬೀತು: ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ
ಮೈಸೂರು,ಅ.19: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಯ ಆರೋಪ ಸಾಭೀತಾದ ಹಿನ್ನಲೆಯಲ್ಲಿ ವಿಶೇಷ ಪೊಕ್ಸೊ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಸನ್ನ ಎಂಬ ವ್ಯಕ್ತಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿ ವಿಚಾರ ಹೊರಗೆ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಅಪ್ರಾಪ್ತೆ ಬಾಲಕಿ 2020 ರಲ್ಲಿ ಮಗುವಿಗೆ ಜನ್ಮ ನೀಡಿದ್ದು, ಈಕೆಯ ತಾಯಿ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಸಿದ್ದರು.
ವಿಚಾರಣೆ ನಡೆಸಿ ಆರೋಪ ಸಾಭೀತಾದ ಹಿನ್ನಲೆಯಲ್ಲಿ ವಿಶೇಷ ಪೊಕ್ಸೊ ನ್ಯಾಯಾಲಯದ ನ್ಯಾಯಾಧೀಶೆ ಶಾಮ ಕಮರೋಜ್ ಆರೋಪಿ ಪ್ರಸನ್ನ ಅವರಿಗೆ 20 ವರ್ಷಗಳ ಕಠಿಣ ಸಜೆ ಹಾಗೂ 50 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.