ಶೀಘ್ರದಲ್ಲೇ JDS ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ನಿಖಿಲ್ ಹೆಸರು ಕೂಡ ಇರಬಹುದು ಎಂದ ಎಚ್‌.ಡಿ. ಕುಮಾರಸ್ವಾಮಿ

Update: 2022-10-20 11:02 GMT

ಮೈಸೂರು: 'ಶೀಘ್ರದಲ್ಲೇ ಬಿಡುಗಡೆ ಮಾಡಲಿರುವ ಪಕ್ಷದ 126 ಅಭ್ಯರ್ಥಿಗಳ  ಪಟ್ಟಿಯಲ್ಲಿ ಪುತ್ರ, ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಸರು ಕೂಡ  ಇರಬಹುದು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಮಟ್ಟದ ಎರಡನೇ ದಿನದ ಕಾರ್ಯಾಗಾರ ಆರಂಭಕ್ಕೂ ಮುನ್ನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷವನ್ನು 126ರ ಗಡಿ ತಲುಪಿಸುವಲ್ಲಿ ಪ್ರಯತ್ನ ಮಾಡಲಿದ್ದಾರೆ. ಬಹುತೇಕ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, 126ರ ಪಟ್ಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಹೆಸರು ಕೂಡ  ಇರಬಹುದು' ಎಂದು ಹೇಳಿದರು. 

''30-40 ಸ್ಥಾನ ಗೆದ್ದು ಯಾವುದಾದರೊಂದು ಪಕ್ಷದ ಜೊತೆ ಹೊಂದಾಣಿಕೆ ಮಾಡ್ಕೊಂಡು ಹೋಗಬಹುದು ಅನ್ನೋ ಮನೋಭಾವ ನಮ್ಮ ಶಾಸಕರಲ್ಲಿ ಇದ್ರೆ ಅದನ್ನು ತೆಗೆದು ಹಾಕಿ'' ಎಂದು ಇದೇ ವೇಳೆ ತನ್ನ ಪಕ್ಷದ ಶಾಸಕರಿಗೆ ಕುಮಾರಸ್ವಾಮಿ ಅವರು ಸಲಹೆ ನೀಡಿದರು. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News